ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಜೀಪಿನಿಂದ ಹಾರಿದ ಯುವಕ ಸಾವು - Mahanayaka

ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಜೀಪಿನಿಂದ ಹಾರಿದ ಯುವಕ ಸಾವು

chamarajanagara
29/11/2022

ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಪ್ರಾಣವನ್ನೇ ಕಳೆದುಕೊಂಡಿರುವ ಧಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಇಂದು ನಡೆದಿದೆ.

ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ  ಲಿಂಗರಾಜು ಎಂಬಾತ  ಮೃತ ದುರ್ದೈವಿ. ಅಪ್ರಾಪ್ತೆಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದು ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ರಂದು  ಪ್ರಕರಣ ದಾಖಲಾಗಿತ್ತು.

ಇಂದು ಆತನನ್ನು ಪೊಲೀಸರು ಠಾಣೆಗೆ ಕರೆದೊಯ್ಯವಾಗ ಪರಾರಿಯಾಗಲು ಜೀಪಿನಿಂದ ಲಿಂಗರಾಜು ಹಾರಿ ತೀವ್ರವಾಗಿ ಗಾಯಗೊಂಡಿದ್ದಾನೆ‌. ಬಳಿಕ, ಆಸ್ಪತ್ರೆಗೆ ರವಾನಿಸಲಾಯಿತರಾದರೂ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ಸಾವು ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ