ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಯುವಕ ಮನೆಗೆ ಬಂದ: ನಡೆಯಿತು ಮಹಿಳೆಯ ಬರ್ಬರ ಹತ್ಯೆ!

ಬೆಂಗಳೂರು: ಕೊಡಿಗೇಹಳ್ಳಿ ಮನೆಯಲ್ಲಿ ಒಂಟಿ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 19ರಂದು ಕೊಡಿಗೇಹಳ್ಳಿ ಮನೆಯಲ್ಲಿ ಶೋಭಾ(48) ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು. ಏಪ್ರಿಲ್ 19ರಂದು ಮಗಳು ಎಷ್ಟು ಬಾರಿ ಫೋನ್ ಮಾಡಿದರೂ ಶೋಭಾ ಅವರು ಕರೆ ಸ್ವೀಕರಿಸಿರಲಿಲ್ಲ.

ಅನುಮಾನಗೊಂಡ ಮಗಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಹತ್ಯೆ ಆರೋಪಿಯನ್ನು ಬಂಧಿಸಿದ್ದಾರೆ.

ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಗೌಡ ಬಂಧಿತ ಆರೋಪಿ ಯಾಗಿದ್ದಾನೆ. ಏಪ್ರಿಲ್ 19ರ ಮಧ್ಯರಾತ್ರಿ ನವೀನ್ ಗೌಡ ಶೋಭಾ ಅವರ ಮನೆಗೆ ಬಂದಿದ್ದ. ರಾತ್ರಿ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೋರ ಹೋಗಿದ್ದ ಶೋಭಾ 11:30ಕ್ಕೆ ಅದೇ ವ್ಯಕ್ತಿಯ ಜೊತೆ ವಾಪಸ್ ಬಂದಿದ್ದಾರೆ.

ಈ ಮಧ್ಯೆ ಇವರ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿದ್ದು, ಈ ವೇಳೆ ನವೀನ್ ಗೌಡ ಶೋಭಾ ಅವರ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಬೆಳಗ್ಗೆ 6:30ಕ್ಕೆ ನವೀನ್ ಗೌಡ ಮನೆಯಿಂದ ಒಬ್ಬನೇ ಹೊರಗೆ ಹೋಗಿದ್ದಾನೆ.

ಶೋಭಾ ಅವರ ಮನೆಯಿಂದ ಹೊರಡುವುದಕ್ಕೂ ಮುನ್ನ ಅವರ ಕಾರು, ಕತ್ತಿನಲ್ಲಿದ್ದ ಸರ, ಎಟಿಎಂ ಕಾರ್ಡ್ ತೆಗೆದುಕೊಂಡು ಹೋಗಿದ್ದ. ಅಲ್ಲದೇ ಎಟಿಎಂನಿಂದ 1 ಲಕ್ಷ 80 ಸಾವಿರ ರೂಪಾಯಿ ಹಣ ವಿಥ್ ಡ್ರಾ ಮಾಡಿಕೊಂಡಿದ್ದಾನೆ.

ಹಂತಕ ಶೋಭಾ ಅವರ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿಕೊಂಡಿದ್ದರಿಂದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನವೀನ್ ಗೌಡ ಬೆಂಗಳೂರಿನ ಬನಶಂಕರಿ ನಿವಾಸಿಯಾಗಿದ್ದ. ಇನ್ ಸ್ಟಾಗ್ರಾಂನಲ್ಲಿ ಇವರಿಬ್ಬರ ಮಧ್ಯೆ ಪರಿಚಯವಾಗಿ ಸ್ನೇಹ ಬೆಳೆದಿತ್ತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth