ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ಯುವಕ! - Mahanayaka

ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ಯುವಕ!

mangalore
30/10/2023


Provided by

ಮಂಗಳೂರಿನ ನೇತ್ರಾವತಿ ನದಿಯ ಸೇತುವೆ ಬಳಿ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾಷ್ಟ್ರೀಯ ಹೆದ್ದಾರಿ‌ 66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಧಾವಿಸಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ಅಡಚಣೆಯುಂಟಾಯಿತು.

ಇತ್ತೀಚಿನ ಸುದ್ದಿ