ವಾಟ್ಸಾಪ್ ಸ್ಟೇಟಸ್ ಹಾಕಿ ಸಾವಿಗೆ ಶರಣಾದ ಯುವಕ!

ಸಾಯುವ ಕುರಿತಾಗಿ ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ರೆನೀಶ್ ಮೃತ ಯುವಕ ಎಂದು ತಿಳಿದುಬಂದಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದು, ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw