ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು - Mahanayaka

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

siddharth
17/09/2023


Provided by

ಲಕ್ನೋ: ಜಿಮ್ ನಲ್ಲಿ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಶನಿವಾರ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರಸ್ವತಿ ವಿಹಾರ್ ಮೂಲದ ಯುವಕ ಸಿದ್ಧಾರ್ಥ್(21) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ನೋಯ್ಡಾದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.

ಸಿಸಿ ಕ್ಯಾಮರಾದಲ್ಲಿ ಕಂಡು ಬಂದಂತೆ ಟ್ರೆಡ್ ಮಿಲ್ ಗೆ ಹತ್ತಿ ಓಡುತ್ತಿದ್ದ ಸಿದ್ಧಾರ್ಥ್ ಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಅವರು ತಕ್ಷಣವೇ ನಿಂತುಕೊಂಡಿದ್ದಾರೆ. ಬಳಿಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಸ್ಥಳದಲ್ಲಿದ್ದ ಇತರರು ಅವರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಸಿದ್ಧಾರ್ಥ್ ನಿಶ್ಚಲವಾಗಿದ್ದುದ್ದರಿಂದ ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

ಸಾವಿಗೀಡಾಗುವುದಕ್ಕೂ 10 ನಿಮಿಷಗಳ ಮೊದಲು ಸಿದ್ಧಾರ್ಥ್ ತನ್ನ ತಾಯಿಯ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದರು ಎಂದು ಹೇಳಲಾಗಿದೆ. ಇದಾಗಿ ಕೆಲವೇ ಕ್ಷಣಗಳಲ್ಲಿ ಅವರು ಸಾವಿಗೀಡಾಗಿದ್ದಾರೆ.

ಇತ್ತೀಚಿನ ಸುದ್ದಿ