ಪತ್ನಿಯಿಂದ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಯುವ ರಾಜ್ ಕುಮಾರ್!

ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಸುದ್ದಿ ಇನ್ನೂ ಹಸಿಯಾಗಿರುವಾಗಲೇ ಡಾ.ರಾಜ್ ಕುಮಾರ್ ಕುಟುಂಬದ ಯುವ ಅವರು ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಯುವ ಹಾಗೂ ಶ್ರೀದೇವಿ ವಿವಾಹ ಆಗಿದ್ದರು. ಇವರದ್ದು ಲವ್ ಮ್ಯಾರೇಜ್ ಆಗಿತ್ತು. ಈಗ ಇವರ ನಡುವೆ ಮನಸ್ತಾಪ ಉಂಟಾಗಿದ್ದು, ಹೀಗಾಗಿ ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97