ಅಪಾರ್ಟ್ ಮೆಂಟ್ ನಲ್ಲಿ ಪ್ರಿಯಕರನಿಂದ ಯುವತಿಯ ಬರ್ಬರ ಹತ್ಯೆ!
26/11/2024
ಬೆಂಗಳೂರು: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಇಂದಿರಾನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಮಾಯಾ ಗೊಗಾಯ್ ಹತ್ಯೆಗೀಡಾದ ಯುವತಿ ಎಂದು ಗುರುತಿಸಲಾಗಿದೆ. ಈಕೆ ಅಸ್ಸಾಂ ಮೂಲದವಳಾಗಿದ್ದು, ಇಲ್ಲಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.
ಕೊಲೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಇಂದಿರಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: