ಫಿಟ್ನೆಸ್ ಸೆಂಟರ್ ನ ಮೂರನೇ ಮಹಡಿಯಿಂದ ಬಿದ್ದು ಯುವತಿ ಸಾವು!

ಬೆಂಗಳೂರು: ಫಿಟ್ನೆಸ್ ಸೆಂಟರ್ ವೊಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಅದೇ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ನಡೆದಿದೆ.
ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿಯಾಗಿದ್ದಾಳೆ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್ ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ಈಕೆ ಕಳೆದ 8 ತಿಂಗಳುಗಳಿಂದ ಇಲ್ಲಿಯೇ ಕೆಲಸ ಮಾಡುತ್ತಿದ್ದಳು. ಆದ್ರೆ ಫಿಟ್ನೆಸ್ ಸೆಂಟರ್ ನ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.
ಯುವತಿಯ ಸಾವಿಗೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ, ಮೂರನೇ ಮಹಡಿಯಿಂದ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD