ದುಬೈನಲ್ಲಿ ಕಾರು ಅಪಘಾತದಲ್ಲಿ ಮಂಗಳೂರಿನ ಯುವತಿ ಸಾವು!

ಉಳ್ಳಾಲ: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಸಾವನ್ನಪ್ಪಿದ ಯುವತಿಯಾಗಿದ್ದಾರೆ. ಇವರು ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಇವರ ಏಕೈಕ ಪುತ್ರಿಯಾಗಿದ್ದಾರೆ.
ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ವಿದಿಶಾ ಕೆಲಸ ಮಾಡಿದ್ದರು. ಬಳಿಕ 2019ರಲ್ಲಿ ದುಬೈಗೆ ತೆರಳಿದ್ದು ಎಕ್ಸ್ ಕ್ಯೂಚೆಟ್ ನಲ್ಲಿ ಅಧಿಕಾರಿಗಳಾಗಿ 5 ವರ್ಷಗಳ ಕಾಲ ಕಾರ್ಯನಿರ್ವಹಿಸುತ್ತಿದ್ದರು.
ಪ್ರತಿದಿನ ಕ್ಯಾಬ್ ನಲ್ಲಿ ವಿದಿಶಾ ಪ್ರಯಾಣಿಸುತ್ತಿದ್ದರು. ಆದರೆ ಗುರುವಾರ ತಡವಾಗಿದೆ ಎಂದು ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಸದೇ ಮೃತಪಟ್ಟಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth