ಕಾರ್ಕಳ: ಯುವತಿಯನ್ನು ಅಪಹರಿಸಿ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ - Mahanayaka
5:24 PM Wednesday 27 - August 2025

ಕಾರ್ಕಳ: ಯುವತಿಯನ್ನು ಅಪಹರಿಸಿ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

udupi
24/08/2024


Provided by

ಕಾರ್ಕಳ: ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಅಲ್ತಾಫ್ ಹಾಗೂ ಸುಧೀರ್ ಬಂಧಿತ ಆರೋಪಿಗಳಾಗಿದ್ದು, ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ಕೂಡ ವಶಪಡಿಸಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಗೆ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು ಎನ್ನಲಾಗಿದೆ. ಶುಕ್ರವಾರ ತನ್ನನ್ನ ಭೇಟಿಯಾಗುವಂತೆ ನೊಂದ ಯುವತಿಗೆ ಅಲ್ತಾಫ್  ಕರೆ ಮಾಡಿ ಹೇಳಿದ್ದ. ಸಂತ್ರಸ್ತೆ ಅಲ್ಲಿಗೆ ತೆರಳಿದ  ವೇಳೆ ಆಕೆಯನ್ನು ಅಪಹರಿಸಲಾಗಿದೆ.  ಬಳಿಕ ಮತ್ತು ಬರುವ ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಅಂತ ದೂರಿನಲ್ಲಿ ತಿಳಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಅಲ್ತಾಫ್ ಹಾಗೂ ಡ್ರಿಂಕ್ಸ್ ತಂದುಕೊಟ್ಟ ಸುಧೀರ್ ಎಂಬಾತನನ್ನು ಬಂಧಿಸಲಾಗಿದ್ದು, ಇವರಿಬ್ಬರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅತ್ಯಾಚಾರದ ಬಳಿಕ ಯುವತಿಯನ್ನು ಆರೋಪಿ ಅಲ್ತಾಫ್ ಆತನ ಕಾರಿನಲ್ಲಿ ಯುವತಿಯ ಮನೆಗೆ ಬಿಟ್ಟು ಹೋಗಿದ್ದಾನೆ. ಅತ್ಯಾಚಾರದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಕಾರ್ಕಳ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ