ಜಾತಕದಲ್ಲಿ ದೋಷ ಇದೆ ಎಂದು ನಂಬಿಸಿ ಯುವತಿ ಮೇಲೆ ಕಾಮುಕ ಅರ್ಚಕನಿಂದ ಅತ್ಯಾಚಾರ!
ಕೊಟ್ಟಿಗೆಹಾರ: ಮದುವೆ ಜಾತಕ ತೋರಿಸುವ ನೆಪದಲ್ಲಿ ಎಸ್.ಸಿ. ಸಮುದಾಯದ ಯುವತಿಗೆ ದೇವಾಲಯದ ಅರ್ಚಕ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ.
23 ವರ್ಷದ ಎಸ್.ಸಿ. ಸಮುದಾಯದ ಯುವತಿ ನೀಡಿರುವ ದೂರಿನ ಪ್ರಕಾರ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಇದೆ.
2025ರ ನವೆಂಬರ್ 23 ರಿಂದ 2026ರ ಫೆಬ್ರವರಿ 2ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಫೆಬ್ರವರಿ 2, 2026ರಂದು ಮಧ್ಯಾಹ್ನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಎಸ್ ಸಿ/ಎಸ್ ಟಿ (ಅತ್ಯಾಚಾರ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:
6 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ
ಪ್ರೀತಿಸಿದವನಿಗಾಗಿ ವಿಲನ್ ಆದ ವಧು: ವರನಿಗೆ ಚೂರಿ ಇರಿತ ಪ್ರಕರಣಕ್ಕೆ ಟ್ವಿಸ್ಟ್
ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿ, ಆತ್ಮಹತ್ಯೆಗೆ ಶರಣಾದ ಮನೆಕೆಲಸದವ!
ನಡು ರಸ್ತೆಯಲ್ಲಿ ನಮಾಝ್: ಮಹಿಳೆಯ ಹುಚ್ಚಾಟಕ್ಕೆ ಸಾರ್ವಜನಿಕರು ಸುಸ್ತು: ಮಹಿಳೆಯ ವರ್ತನೆಕ್ಕೆ ಕಾರಣ ಏನು?
ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























