ಯುವತಿಯನ್ನು ಬ್ಯಾಡ್ ಟಚ್ ಮಾಡಿ ಇಬ್ಬರು ಕಾಮುಕರಿಂದ ಲೈಂಗಿಕ ಕಿರುಕುಳ!

ಬೆಂಗಳೂರು: ಯುವತಿಯನ್ನು ಬ್ಯಾಡ್ ಟಚ್ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬರ್ತೀಯಾ ಎಂದು ಕೇಳಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನೊಂದ ಯುವತಿ, ತನ್ನ ಸ್ನೇಹಿತರ ಮನೆಗೆಂದು ಬೆಳಗ್ಗಿನ ಜಾವ 4:30ರ ಸುಮಾರಿಗೆ ಸ್ಕೂಟಿಯಲ್ಲಿ ಹೊರಟಿದ್ದರು. ಈ ವೇಳೆ ಇಬ್ಬರು ಅಪರಿಚಿತ ಯುವಕರು ಸ್ಕೂಟರ್ ನನ್ನು ಹಿಂಬಾಲಿಸಿಕೊಂಡು ಬಂದು ಅಡ್ಡ ಹಾಕಿದ್ದಾರೆ. ಇದೇ ವೇಳೆ ಖಾಸಗಿ ಭಾಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಈ ವೇಳೆ ಯುವತಿಯ ಸಹಾಯಕ್ಕೆ ಬಂದ ಸಾರ್ವಜನಿಕರಿಗೆ ಚಾಕು ತೋರಿಸಿ ಬೆದರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಕಾಮುಕರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: