ಹೊಸ ಮನೆ ಖರೀದಿಸಿ,ಅದ್ಧೂರಿಯಾಗಿ ಗೃಹ ಪ್ರವೇಶ ಮಾಡಿದ್ದ ಯುವತಿ ಅದೇ ಮನೆಯಲ್ಲಿ ಸಾವಿಗೆ ಶರಣು! - Mahanayaka
12:56 PM Thursday 23 - October 2025

ಹೊಸ ಮನೆ ಖರೀದಿಸಿ,ಅದ್ಧೂರಿಯಾಗಿ ಗೃಹ ಪ್ರವೇಶ ಮಾಡಿದ್ದ ಯುವತಿ ಅದೇ ಮನೆಯಲ್ಲಿ ಸಾವಿಗೆ ಶರಣು!

ashweni
08/06/2023

ಹೊಸ ಮನೆ ಖರೀದಿಸಿದ ಯುವತಿ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡಿದ ಐದೇ ದಿನಗಳಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25), ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ. ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.

ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬುವವರಿಂದ ಮನೆಯೊಂದನ್ನು ಖರೀದಿಸಿ ಜೂನ್ 3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ. ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ