ಯುವತಿಯ ಕೊಲೆ ಪ್ರಕರಣ: ಆರೋಪಿಯ ಶವ ಬಾವಿಯಲ್ಲಿ ಪತ್ತೆ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುತ್ತನಕಟ್ಟೆ ಬಳಿ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯ ಮೃತದೇಹ ಸಮೀಪದ ಬಾವಿಯೊಂದರಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ ಇಂದು ಬೆಳಿಗ್ಗೆ ತನ್ನ ನೆರೆಯ ಮನೆಯ ಯುವತಿ ರಕ್ಷಿತಾ ಪೂಜಾರಿ ಎಂಬಾಕೆಯ ಮೇಲೆ ಚಾಕುವಿನಿಂದ ಕುತ್ತಿಗೆ ಹಾಗೂ ಎದೆಗೆ ಇರಿದು ಪರಾರಿಯಾಗಿದ್ದ. ಈತನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಂಜೆ ವೇಳೆಗೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಳು.
ಘಟನೆಯ ಬೆನ್ನಲ್ಲೇ ಪರಾರಿಯಾಗಿದ್ದ ಕಾರ್ತಿಕ್ ಪೂಜಾರಿಯ ಮೃತದೇಹ ಅಲ್ಲೇ ಸಮೀಪದಲ್ಲೇ ಇರುವ ಬಾವಿಯಲ್ಲಿ ಪತ್ತೆಯಾಗಿದೆ. ಯುವತಿಯ ಮೇಲೆ ಚಾಕುವಿನಿಂದ ಇರಿದ ನಂತರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸದ್ಯ ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿಗಳು ಪೊಲೀಸರ ತನಿಖೆಯ ನಂತರ ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD