ಸೋಶಿಯಲ್ ಮೀಡಿಯಾದಲ್ಲಿ ಮುಸ್ಲಿಮರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಯುವಕನ ಬಂಧನ

ಸೋಶಿಯಲ್ ಮೀಡಿಯಾದಲ್ಲಿ ಮುಸ್ಲಿಮರ ವಿರುದ್ಧ ಆಕ್ಷೇಪಾರ್ಹ ಪೋಸ್ಟನ್ನು ಹಂಚಿಕೊಂಡ ಯುವಕನನ್ನು ಉತ್ತರ ಪ್ರದೇಶದ ಪೊಲೀಸರು ಬಂದಿದ್ದಾರೆ. ಪವಿತ್ರ ಕುರ್ ಆನ್ ನ ಮೋರ್ಫ್ ಮಾಡಿದ ಚಿತ್ರದೊಂದಿಗೆ ಮುಸ್ಲಿಂ ಸಮುದಾಯದ ವಿರುದ್ಧ ನಿಂದನೆಯ ಪೋಸ್ಟ್ ಅನ್ನು ಈತ ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪರಶುರಾಮ್ ವಂಶಜ್ ಎಂಬ ಹೆಸರಿನ ಫೇಸ್ಬುಕ್ ಪುಟದಲ್ಲಿ ಈ ವ್ಯಕ್ತಿ ಮುಸ್ಲಿಮರ ವಿರುದ್ಧ ನಿರಂತರ ಆಕ್ಷೇಪಾರ್ಹ ಮತ್ತು ನಿಂದನೆಯ ಪೋಸ್ಟುಗಳನ್ನು ಹಂಚಿಕೊಳ್ಳುತ್ತಿದ್ದ.
ಇದೇ ವೇಳೆ ಬಂಧಿತ ಆರೋಪಿ ಕಸ್ಟಡಿಯಲ್ಲಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೊಲೀಸರು ಹಂಚಿಕೊಂಡಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ನಿರಂತರ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದ ವ್ಯಕ್ತಿಯನ್ನು ನಾವು ಬಂಧಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹಂಚಿಕೊಂಡ ಪೋಸ್ಟ್ ನಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj