ಗಣೇಶೋತ್ಸವ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ರಾಯಚೂರು: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನಡೆದಿದೆ.
ನರಸಿಂಹ (22) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆ ವೇಳೆ ಈ ದುರ್ಘಟನೆ ನಡೆದಿದೆ. ಈ ಯುವಕ ಪಿಕಪ್ ಮೇಲೆ ಗಣಪತಿಯನ್ನ ಹಿಡಿದುಕೊಂಡು ಕುಳಿತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ, ಕೆಳಗೆ ಬಿದ್ದಿದ್ದಾನೆ.
ಬೊಲೆರೋ ಪಿಕಪ್ ನಲ್ಲಿ ಇನ್ನುಳಿದ ಯುವಕರಿಗೂ ವಿದ್ಯುತ್ ಸ್ಪರ್ಶಿಸಿದೆ, ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆಯ ನಡುವೆಯೇ ಅದ್ದೂರಿಯ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿತ್ತು. ಇದೀಗ ಸಂಭ್ರಮದ ಕಾರ್ಯಕ್ರಮದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ದುಃಖದ ಛಾಯೆ ಮೂಡಿದೆ. ಘಟನೆ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD