ಗಣೇಶ ಮೆರವಣಿಗೆ ವೇಳೆ ಕುಸಿದು ಬಿದ್ದು ಯುವಕ ಸಾವು

ರಾಯಚೂರು: ಗಣೇಶ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಿದ್ದ ಯುವಕನೊಬ್ಬ ಫಿಟ್ಸ್ ಕಾಣಿಸಿಕೊಂಡು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ತೀನ್ ಖಂದಿಲ್ ವೃತ್ತದ ಬಳಿ ನಡೆದಿದೆ.
ಮಂಗಳವಾರ ಪೇಟೆಯ ಅಭಿಷೇಕ್ (24) ಮೃತಪಟ್ಟ ಯುವಕನಾಗಿದ್ದಾನೆ. ಡಿಜೆ ಸೌಂಡ್ ಗೆ ಅಭಿಷೇಕ್ ಎಲ್ಲರ ಜೊತೆ ಸೇರಿ ಡಾನ್ಸ್ ಮಾಡುತ್ತಿದ್ದ. ಡಾನ್ಸ್ ಮಾಡಿ ಸುಸ್ತಾಗಿ ಏಕಾಏಕಿ ಅಭಿಷೇಕ್ ಸುಸ್ತಾಗಿ ಕುಸಿದು ಬಿದ್ದಿದ್ದ. ಈ ವೇಳೆ ಆತನಿಗೆ ಫಿಟ್ಸ್ ಕಾಣಿಸಿಕೊಂಡಿದೆ.
ತಕ್ಷಣವೇ ಆತನನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ. ಈ ಘಟನೆ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD