ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ - Mahanayaka

ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

rangaswamy
08/07/2023


Provided by

ಚಾಮರಾಜನಗರ: ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯ ಆದೇಶ ನೀಡಿದೆ.

ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಯುವಕ ರಂಗಸ್ವಾಮಿ(21) ಶಿಕ್ಷೆಗೊಳಗಾದ ಅಪರಾಧಿ.‌ ವಾರಿಗೆಯಲ್ಲಿ ದೊಡ್ಡಪ್ಪನ ಮಗಳಾದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದನು.

ಈ ಸಂಬಂಧ 2020 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಚಾರ್ಚ್ ಶೀಟ್ ಸಲ್ಲಿಕೆಯಾಗಿತ್ತು. ಯುವಕ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ನಿಶಾರಾಣಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ 40 ಸಾವಿರ ದಂಡ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 4 ಲಕ್ಷ ಪರಿಹಾರ ಕೊಡಬೇಕೆಂದು ನ್ಯಾಯಾಧೀಶರು ನಿರ್ದೇಶನ ಕೊಟ್ಟಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೇಶ್ ವಾದ ಮಂಡಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ