ಮದ್ಯದ ಮತ್ತಿನಲ್ಲಿ ರೈಲು ಹಳಿಯ ಮೇಲೆ ಮಲಗಿದ್ದ ಯುವಕರು ರೈಲು ಹರಿದು ಸಾವು!

ಕೊಪ್ಪಳ: ಮದ್ಯದ ಮತ್ತಿನಲ್ಲಿ ರೈಲು ಹಳಿಯ ಮೇಲೆ ಮಲಗಿದ್ದ ಮೂವರು ರೈಲಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳದ ಗಂಗಾವತಿ ನಗರದಲ್ಲಿ ನಡೆದಿದೆ.
ಗಂಗಾವತಿಯ ಹಿರೇಜಂತಕಲ್ ನ ಸುನೀಲ್ (23), ವೆಂಕಟ ಭೀಮನಾಯ್ಕ (20) ಹಾಗೂ ಇಲಾಯಿ ಕಾಲೋನಿಯ ಮೌನೇಶ್ ಪತ್ತಾರ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗುರುವಾರ ತಡರಾತ್ರಿ ಮೂವರು ಯುವಕರು ರೈಲ್ವೆ ಹಳಿ ಮೇಲೆ ಮದ್ಯಸೇವನೆ ಮಾಡಿ ಅಮಲಿನಲ್ಲಿ ಹಳಿ ಮೇಲೆಯೇ ಮಲಗಿದ್ದರು ಎನ್ನಲಾಗಿದೆ.
ಇದೇ ವೇಳೆ ಇದೇ ಸಮಯಕ್ಕೆ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುವ ರೈಲು ಯುವಕರ ಮೇಲೆ ಹರಿದಿದೆ. ಈ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗದಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97