ಬಿಜೆಪಿ ವಿಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ?:  ದಾಖಲೆ ಸಹಿತ ವಿಡಿಯೋ ಬಿಡುಗಡೆ ಮಾಡಿದ ಯೂಟ್ಯೂಬರ್ ಧ್ರುವ್ ರಾಠಿ - Mahanayaka
9:07 AM Wednesday 20 - August 2025

ಬಿಜೆಪಿ ವಿಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ?:  ದಾಖಲೆ ಸಹಿತ ವಿಡಿಯೋ ಬಿಡುಗಡೆ ಮಾಡಿದ ಯೂಟ್ಯೂಬರ್ ಧ್ರುವ್ ರಾಠಿ

dhruv rathee
02/04/2024


Provided by

ಖ್ಯಾತ ಯೂಟ್ಯೂಬರ್  ಧ್ರುವ್ ರಾಠಿ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ಹಲವು ವಿಚಾರಗಳಿಗೆ ಸ್ಪಷ್ಟ ರೂಪವನ್ನು ಈ ವಿಡಿಯೋ ನೀಡಿದೆ.

ಇವರ ವಿಡಿಯೋದಲ್ಲಿ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ? ಉನ್ನತ ತನಿಖಾ ಸಂಸ್ಥೆಗಳನ್ನು ಹೇಗೆ ದುರ್ಬಳಕೆ ಮಾಡಿದೆ ಎನ್ನುವ ಬಗ್ಗೆ ದಾಖಲೆ ಸಹಿತವಾಗಿ ವಿವರಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಬ್ಲಾಕ್ ಮಾಡಿರುವುದು, ರಾಹುಲ್ ಗಾಂಧಿ ಅವರನ್ನು ತಡೆಯಲು ಬಿಜೆಪಿ ಏನೇನು ಮಾಡಿದೆ. ಎಲೆಕ್ಷನ್ ಬಾಂಡ್ ಗಳು ರಾಜಕೀಯ ನಾಯಕರ ಬಂಧನಕ್ಕೆ ಹೇಗೆ ಕಾರಣವಾಗಿದೆ ಎನ್ನುವುದನ್ನು ಸಾಕಷ್ಟು ಆಧಾರಗಳೊಂದಿಗೆ ವಿವರಿಸಿದ್ದಾರೆ.

ಈ ಬಗೆಗಿನ ಸಂಪೂರ್ಣ ಮಾಹಿತಿ ಈ ಕೆಳಗಿನ ವಿಡಿಯೋದಲ್ಲಿದೆ:


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ