ಫೇಕ್ ವೀಡಿಯೋ ಮಾಡಿ ಸುಳ್ಳು ಸುದ್ದಿ ಹರಡಿ ಜೈಲು ಸೇರಿದ್ದ ಯೂಟ್ಯೂಬರ್ ನನ್ನು ಪಕ್ಷಕ್ಕೆ ಸೇರಿಸಿಕೊಂಡು ಟೀಕೆಗೆ ಗುರಿಯಾದ ಬಿಜೆಪಿ

ಯೂಟ್ಯೂಬರ್ ಮನೀಶ್ ಕಶ್ಯಪ್, ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ಮೊಹಮ್ಮದ್ ಝಬೈರ್, ಹಲವಾರು ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರಲ್ಲಿ ಸುರಕ್ಷತೆಯ ಭಯವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ ಮಾಡಿದ್ದ ಮನೀಶ್ ಕಶ್ಯಪ್ ನೆನಪಿದೆಯೇ? ಆತನನನ್ನು ಈ ಹಿಂದೆ ಅಪಾಯಕಾರಿ ತಪ್ಪು ಮಾಹಿತಿ ನೀಡಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ ಸನ್ಮಾನಿಸಿದೆ. ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರತಿಯೊಬ್ಬ ಪ್ರಭಾವಿಗಳಿಗೆ ಇದು ತುಂಬಾ ಉತ್ತೇಜನಕಾರಿಯಾಗಿದೆ ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth