ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷಕ್ಕೆ ಯೂಸುಫ್ ಪಠಾಣ್ ಸೇರ್ಪಡೆ: ಲೋಕಸಭಾ ಚುನಾವಣೆಯಲ್ಲಿ ಬೆರ್ಹಾಂಪುರದಿಂದ ಸ್ಪರ್ಧೆ

ಭಾರತದ ಮಾಜಿ ಕ್ರಿಕೆಟಿಗ ಮತ್ತು ಐಪಿಎಲ್ ಸ್ಟಾರ್ ಯೂಸುಫ್ ಪಠಾಣ್ ಇಂದು ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಗೆ ಸೇರುವ ಮೂಲಕ ರಾಜಕಾರಣಿಯಾಗಿ ತಮ್ಮ ಹೊಸ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಠಾಣ್ ಅವರು ಬೆರ್ಹಾಂಪೋರ್ (ಬಹ್ರಾಂಪುರ) ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಪಠಾಣ್ ಅವರನ್ನು ಬೆರ್ಹಾಂಪೋರ್ ಸ್ಥಾನದಿಂದ ಕಣಕ್ಕಿಳಿಸುವ ಮೂಲಕ, ಟಿಎಂಸಿ ಕಾಂಗ್ರೆಸ್ ಗೆ ಮಹತ್ವದ ಸವಾಲನ್ನು ಒಡ್ಡಿದೆ. ಈ ಲೋಕಸಭಾ ಸ್ಥಾನವನ್ನು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೊಂದಿದ್ದಾರೆ. ಈ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲವಾದರೂ, ಚೌಧುರಿ ಮತ್ತೊಮ್ಮೆ ಈ ಸ್ಥಾನದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಟಿಎಂಸಿ ಪಕ್ಷವು ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಅವರನ್ನು ಬುರ್ದ್ವಾನ್ ದುರ್ಗಾಪುರ ಕ್ಷೇತ್ರದಿಂದ ಮತ್ತು ಮಾಜಿ ನಟ ಶತ್ರುಘ್ನ ಸಿನ್ಹಾ ಅವರನ್ನು ಅಸನ್ಸೋಲ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth