ಯುವಕ—ಯುವತಿಯಿಂದ ಬೈಕ್ ಕಳವು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳ್ಳತನವಾದ ಘಟನೆ ಧರ್ಮಸ್ಥಳದಲ್ಲಿ ನಡೆದಿದ್ದು, ಯುವಕ ಮತ್ತು ಯುವತಿ ಸೇರಿ ಬೈಕ್ ಕದ್ದಿರುವುದು ಬೆಳಕಿಗೆ ಬಂದಿದೆ.
ಮೂಡುಬಿದಿರೆಯ ಕಾಲೇಜ್ ಒಂದರ ವಿದ್ಯಾರ್ಥಿ ಶಿಶಿಲದ ಜೀವನ್, ಡಿ.16ರಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಬೈಕನ್ನು ಪಾರ್ಕ್ ಮಾಡಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ ಕಾಲೇಜಿನಿಂದ ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಲಾಗಿದೆ.
ಬೈಕ್ ಅನ್ನು ಓರ್ವ ಯುವಕ ಹಾಗೂ ಯುವತಿ ಸೇರಿ ಕೊಂಡೊಯ್ಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw