3:21 PM Thursday 11 - December 2025

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹೋಗುತ್ತಾರಾ?

18/02/2021

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ತನ್ನಅಂತ್ಯ ಕ್ರಿಯೆಗೆ ಆಗಮಿಸಬೇಕು ಎಂದು ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ನಡೆದಿದ್ದು, ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

25 ವರ್ಷ ವಯಸ್ಸಿನ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ ತನ್ನ ಡೆತ್ ನೋಟ್ ನಲ್ಲಿ  ಅಮ್ಮನಿಗೆ ಮಗನಾಗಿ, ಅಣ್ಣನಿಗೆ ತಮ್ಮನಾಗಿ, ಗೆಳೆಯರಿಗೆ ಒಳ್ಳೆಯ ಸ್ನೇಹಿತನಾಗಿ, ನನ್ನ ಹುಡುಗಿಗೆ ಜೊತೆಗಾರನಾಗಿ ಬಾಳ ಸಂಗಾತಿಯಾಗಲು ವಿಫಲನಾಗಿದ್ದೇನೆ. ಹಾಗಾಗಿ ನಾನು ನಿಮ್ಮಿಂದ ದೂರವಾಗಬೇಕು ಎಂದು ತೀರ್ಮಾನಿಸಿ ನನ್ನ ಇಚ್ಛೆಯಂತೆ ಮರಣ ಹೊಂದುತ್ತೇನೆ ಎಂದು ಬರೆದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನನ್ನಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರು ಭಾಗವಹಿಸಬೇಕು. ಇದು ನನ್ನ ಕೊನೆಯ ಆಸೆ. ಈಡೇರಿಸಿ ಎಂದು ಮನವಿ ಮಾಡಿದ್ದಾನೆ. ಅಂದ ಹಾಗೆ 15 ವರ್ಷಗಳ ಹಿಂದೆ ರಾಮಕೃಷ್ಣಅವರ ತಂದೆ ಚಂದ್ರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

Exit mobile version