ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ - Mahanayaka
10:18 PM Thursday 16 - October 2025

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ

subramanya
13/03/2022

ಸುಬ್ರಹ್ಮಣ್ಯ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಪರಿಣಾಮವಾಗಿ ಯುವಕನಿಗೆ ಗಂಭೀರವಾಗಿ ಗಾಯವಾಗಿದೆ.


Provided by

ಭಾನುವಾರ ಈ ಘಟನೆ ನಡೆದಿದ್ದು, ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದ 21 ವರ್ಷ ವಯಸ್ಸಿನ ಕೋನಡ್ಕ‌ ನಿವಾಸಿ ಗುರುಪ್ರಸಾದ್ ಎಂಬವರು ಆನೆದಾಳಿಗೊಳಗಾದ ಯುವಕ ಎಂದು ಗುರುತಿಸಲಾಗಿದೆ.

ಬೆಳಗ್ಗೆ ಕೊಲ್ಲಮೊಗ್ರು ಇಡ್ನೂರು ಡೈರಿಗೆ ಹಾಲು ಹಾಕಲು ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಗಮನಿಸಿ ತಕ್ಷಣವೇ ಇತರರಿಗೆ ಮಾಹಿತಿ ನೀಡಿ ಕಾಡಾನೆಯನ್ನು ಓಡಿಸಿ ಯುವಕನನ್ನು ರಕ್ಷಿಸಿದ್ದಾರೆ. ಸದ್ಯ ಯುವಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ದಿನ 81 ಮಂದಿಯನ್ನು ಗಲ್ಲಿಗೇರಿಸಿದ ಸೌದಿ ಅರೇಬಿಯಾ ಸರ್ಕಾರ!

ಶೇನ್ ವಾರ್ನ್ ಸಾವಿಗೂ ಮುನ್ನ ಕೊಠಡಿಯಿಂದ ಹೊರ ಹೋಗಿದ್ದ ನಾಲ್ವರು ಹುಡುಗಿಯರು | ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಶಿಕ್ಷಣ, ಪರಿಸರದ ಜಾಗೃತಿಗಾಗಿ 24 ಸಾವಿರ ಕಿ.ಮೀ. ಸೈಕಲ್ ಜಾಥಾ ಪೂರೈಸಿದ ಬೆಂಗಳೂರಿನ ಯುವಕರು

ಕೌಟುಂಬಿಕ ಕಲಹ: ಪತ್ನಿಯ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

ಇತ್ತೀಚಿನ ಸುದ್ದಿ