10:41 PM Thursday 15 - January 2026

ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು

fb live
17/05/2022

ಪಾಲಾ:ತನ್ನ ಕೈಯನ್ನು ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಸುದ್ದಿಯನ್ನು ಫೇಸ್ ಬುಕ್ ನಲ್ಲಿ ಲೈವ್ ಆಗಿ ಬಿತ್ತರಿಸಿದ ಯುವಕನೊಬ್ಬನನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಉತ್ತರ ಪ್ರದೇಶದ ಪಾಲಾ ಕಿಜ್ಜತ್ತಡಿಯೂರಿನ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.  ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫೇಸ್ ಬುಕ್ ನಲ್ಲಿ ಲೈವ್ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ.  ಈ ವಿಡಿಯೋಗೆ ಯುವಕ ‘ಮೈ ಸೂಸೈಡ್ ಲೈವ್’ ಎಂಬ ಶೀರ್ಷಿಕೆ ನೀಡಿದ್ದ.

ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು.  ಅರ್ಧ ಗಂಟೆಯೊಳಗೆ ಎಸ್‌ಎಚ್‌ ಒ ಕೆ.ಪಿ.ಥಾಂಪ್ಸನ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ಮನೆ ಒಳಗಿನಿಂದ ಬೀಗ ಹಾಕಲಾಗಿತ್ತು. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತಾದರೂ ಅವರು ಬರುವ ಮುನ್ನವೇ ಪೊಲೀಸರು ಯುವಕನ ಮನವೊಲಿಸಿ ಮನೆ ಬಾಗಿಲು ತೆರೆಯುವಂತೆ ಮಾಡಿದ್ದಾರೆ.  ಬಳಿಕ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.  ಗಾಯ ಗಂಭೀರವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜ್ಞಾನವಾಪಿ ಮಸೀದಿಯೊಳಗೆ 12 ಅಡಿ ಶಿವಲಿಂಗ ಹಾಗೂ ನಂದಿ ಪತ್ತೆ: ನಾಳೆ ಕೋರ್ಟ್ ಗೆ ವರದಿ

ದೇವಸಹಾಯಂ ಪಿಳ್ಳೈ ಪೋಪ್ ಫ್ರಾನ್ಸಿಸ್  “ಸಂತ” ಎಂದು ಘೋಷಣೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂದು ಅಕ್ಕನಿಂದಲೇ ತಮ್ಮನ ಹತ್ಯೆ!

ಫ್ಯಾಟ್ ಸರ್ಜರಿ ವೇಳೆ ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವು

ಇತ್ತೀಚಿನ ಸುದ್ದಿ

Exit mobile version