ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಹತ್ತಿದ ಪಿಕಪ್: ಇಬ್ಬರಿಗೆ ಗಂಭೀರ ಗಾಯ - Mahanayaka

ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಹತ್ತಿದ ಪಿಕಪ್: ಇಬ್ಬರಿಗೆ ಗಂಭೀರ ಗಾಯ

cow
30/11/2021

ಸಾಂದರ್ಭಿಕ ಚಿತ್ರ


Provided by

ಶಿವಮೊಗ್ಗ: ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಪಿಕಪ್ ಹತ್ತಿಸಿ, ಪರಾರಿಯಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮೇಳಿಕೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

23 ವರ್ಷ ವಯಸ್ಸಿನ ಕಿರಣ್ ಹಾಗೂ 24 ವರ್ಷ ವಯಸ್ಸಿನ ಚರಣ್ ಗಾಯಗೊಂಡವರು ಎಂದು ಗುರುತಿಸಲಾಗಿದ್ದು, ಇವರು ಸಹೋದರು ಎನ್ನಲಾಗಿದೆ. ಮೇಳಿಗೆಯಿಂದ ದನ ಸಾಗಾಟದ ವಾಹನವನ್ನು ಯುವಕರು ಫಾಲೋ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಬೆಜ್ಜವಳ್ಳಿಯಲ್ಲಿ ಪಿಕಪ್ ನ್ನು ತಡೆಯಲು ಯತ್ನಿಸಿದಾಗ ಬೈಕ್ ಮೇಲೆ ಪಿಕಪ್ ಹತ್ತಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.


Provided by

ಸದ್ಯ ಗಾಯಾಳು ಯುವಕರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳು ತಾಲೂಕಿನ ಕಿತ್ತನಗದ್ದೆ ಮಂಜುನಾಥ್ ಅವರ ಪುತ್ರರು ಎಂದು ವರದಿಗಳಿಂದ ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಸಿಕೆ ಹಾಕಲು ಬಂದಾಗ ಅಜ್ಜಿಯ ಮೈಮೇಲೆ ಬಂದ ದೇವರು | ತಹಶೀಲ್ದಾರ್ ಮಾಡಿದ ಉಪಾಯ ಏನು ಗೊತ್ತಾ?

ಯೋಗ ತರಬೇತಿಯ ವೇಳೆ 5 ಯುವತಿಯರಿಗೆ ಲೈಂಗಿಕ ಕಿರುಕುಳ: ತರಬೇತುದಾರನ ವಿರುದ್ಧ ದೂರು

ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

ದೇವೇಗೌಡರಿಗೆ ಅದ್ದೂರಿ ಸ್ವಾಗತ ನೀಡಿದ ಪ್ರಧಾನಿ ಮೋದಿ: ಫೋಟೋ ವೈರಲ್

ನವದಂಪತಿಗಳಿಂದ ಬಂಗಾಡಿ ಬೀಡಿಗೆ ವೀಳ್ಯದೆಲೆ ಸಮರ್ಪಣೆ: ತುಳುನಾಡಿನ ಅವಳಿ ವೀರರು ಕಾನದ—ಕಟದರು | ಸಂಚಿಕೆ: 08

ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧನ ರಕ್ಷಣೆಗೆ ಮುಂದಾಗಿದ್ದ ಯುವಕನನ್ನು ಥಳಿಸಿಕೊಂದ ಗುಂಪು!

 

ಇತ್ತೀಚಿನ ಸುದ್ದಿ