11:50 AM Tuesday 14 - October 2025

ಯುವತಿ ಮೇಲೆ ಗ್ಯಾಂಗ್ ರೇಪ್​: ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ

gang rape
30/03/2022

ಬೆಂಗಳೂರು: ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದೆಹಲಿ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ.

ರಜತ್, ಶಿವ್ ರಾಣಾ, ದೇವ್ ಸರೋಯಿ, ಯೋಗೇಶ್ ಕುಮಾರ್ ಬಂಧಿತ ಆರೋಪಿಗಳು. ಮಾ. 24ರಂದು ಆರೋಪಿ ರಜತ್ ಎಂಬಾತ ಬೆಂಗಳೂರಿನಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಶ್ಚಿಮ ಬಂಗಾಳದ ಯುವತಿಯನ್ನು ರೆಸ್ಟೋರೆಂಟ್​ಗೆ ಕರೆದುಕೊಂಡು ಹೋಗಿದ್ದ. ನಂತರ ತಡರಾತ್ರಿ ಆದ ಕಾರಣ ಸಂಜಯನಗರ ಠಾಣಾ ವ್ಯಾಪ್ತಿಯ ರೂಮ್​ಗೆ ಕರೆದುಕೊಂಡು ಹೋಗಿದ್ದ.

ರೂಮ್​ನಲ್ಲಿ ಬೆದರಿಸಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಸಂಜಯನಗರ ಠಾಣೆಗೆ ದೂರು ನೀಡಿದ್ದು, ಯುವತಿ ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ರಾಷ್ಟ್ರೀಯ ಈಜುಪಟುಗಳಾಗಿದ್ದು, ಅಭ್ಯಾಸಕ್ಕೆಂದು ಬೆಂಗಳೂರಿಗೆ ಬಂದು ವಾಸವಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಯುವಕ; ಆದರೆ ಮೃತಪಟ್ಟಿದ್ದು ಯುವಕ

1 ಕೋಟಿ ರೂ.ಗೂ ಅಧಿಕ ಮೌಲ್ಯದ ಬ್ರೌನ್ ಶುಗರ್ ಸಹಿತ ಆರೋಪಿಗಳ ಬಂಧನ

ರಂಜಾನ್ ಆರಂಭವಾಗುತ್ತಿದ್ದಂತೆಯೇ ಭಾರೀ ಬೆಲೆಗೆ ಮಾರಾಟವಾದ ಒಂಟೆ

ಹುಡುಗರ ಜೊತೆ ಸುತ್ತಾಡಿದ್ದಕ್ಕೆ ಬೈದ ಅಮ್ಮನನ್ನೇ ಹತ್ಯೆಗೈದ ಮಗಳು

ಇತ್ತೀಚಿನ ಸುದ್ದಿ

Exit mobile version