ಸೇಲ್ಸ್ ಗರ್ಲ್ ಗೆ ಲೈಂಗಿಕ ಕಿರುಕುಳ 72 ವರ್ಷದ ವೃದ್ಧನ ಬಂಧನ - Mahanayaka

ಸೇಲ್ಸ್ ಗರ್ಲ್ ಗೆ ಲೈಂಗಿಕ ಕಿರುಕುಳ 72 ವರ್ಷದ ವೃದ್ಧನ ಬಂಧನ

bantwala
06/04/2021

ಬಂಟ್ವಾಳ:  ಸೇಲ್ಸ್ ಗರ್ಲ್ ಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು 72 ವರ್ಷ ವಯಸ್ಸಿನ ವೃದ್ಧನನ್ನು ಬಂಧಿಸಿದ್ದು,  ವೃದ್ಧನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಿದ್ದಕಟ್ಟೆ ನಿವಾಸಿ 72 ವರ್ಷ ವಯಸ್ಸಿನ ಎಸ್.ಎಚ್.ಅಬ್ದುಲ್ ರಹಮಾನ್ ಬಂಧಿತ ಆರೋಪಿಯಾಗಿದ್ದಾನೆ.  ಬಂಟ್ವಾಳ ಅಪರಾಧ ವಿಭಾಗದ ಎಸ್.ಐ.ಸಂಜೀವ ಅವರ ನೇತೃತ್ವದ ತಂಡ ಸಿದ್ದಕಟ್ಟೆ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಜೆ ಬಂಧಿಸಿದ್ದಾರೆ.

ಸಿದ್ದಕಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರವಾಗಿ ಆರೋಪಿ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದ್ದು, ಇದರಿಂದ ಬೇಸತ್ತ ಯುವತಿ ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಯುವತಿಯ ದೂರಿನನ್ವಯ ಕಾರ್ಯಪ್ರವೃತ್ತರಾದ ಬಂಟ್ವಾಳ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸೇಲ್ಸ್ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ