8:40 AM Wednesday 9 - September 2026

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ವಿರೋಧಿಸಿದ್ದಕ್ಕೆ ರೈಲಿನಿಂದ ಕೆಳಗೆ  ಎಸೆದ ಪಾಪಿ!

train
30/04/2022

ಛತ್ತರ್ ಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯೋರ್ವ ಯುವತಿಯನ್ನು ರೈಲಿನಿಂದ ಕೆಳಕ್ಕೆ ತಳ್ಳಿದ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ಖಜುರಾಹೊ ಬಳಿ ನಡೆದಿದೆ.

ಏಪ್ರಿಲ್ 27 ರಂದು ರಾತ್ರಿ ಈ ಘಟನೆ ನಡೆದಿದ್ದು,  ಖಜುರಾಹೊ(ಮಧ್ಯಪ್ರದೇಶ) ಮತ್ತು ಮಹೋಬಾ(ಉತ್ತರ ಪ್ರದೇಶ) ನಿಲ್ದಾಣಗಳ ನಡುವೆ ಚಲಿಸುತ್ತಿದ್ದ  ಪ್ಯಾಸೆಂಜರ್ ರೈಲಿನಲ್ಲಿ ಈ ಘಟನೆ ನಡೆದಿದೆ.  ವ್ಯಕ್ತಿಯು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ ಯುವತಿ ವಿರೋಧಿಸಿದ್ದು, ಈ ವೇಳೆ ಕೋಪಗೊಂಡ ಆತ ಯುವತಿಯನ್ನು ರೈಲಿನಿಂದ ಕೆಳಕ್ಕೆ ತಳ್ಳಿದ್ದಾನೆ ಎನ್ನಲಾಗಿದೆ.

ಸಂತ್ರಸ್ತ ಯುವತಿಯು ಉತ್ತರ ಪ್ರದೇಶದ ಬಂದಾ ಜಿಲ್ಲೆಯ ನಿವಾಸಿಯಾಗಿದ್ದು, ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ಬಾಗೇಶ್ವರ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ರೈಲಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಛತ್ತರ್ ಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆಯನ್ನು ವಿವರಿಸಿರುವ ಸಂತ್ರಸ್ತೆ, “ ‘ನಾನು ಬಾಗೇಶ್ವರ ಧಾಮ್‌ನಲ್ಲಿರುವ ದೇವಸ್ಥಾನಕ್ಕೆ ಬಂದಿದ್ದೆ. ಒಬ್ಬ ಸಹ-ಪ್ರಯಾಣಿಕ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ನಾನು ವಿರೋಧಿಸಿದೆ ಮತ್ತು ಅವನಿಗೆ ದೂರವಿರಲು ಹೇಳಿದೆ. ನಾನು ವಿರೋಧಿಸುವ ಪ್ರಯತ್ನದಲ್ಲಿ ಅವನ ಕೈಗೆ ಕಚ್ಚಿದೆ. ನಂತರ ಆತ ರಾಜನಗರದ ಬಳಿ ಚಲಿಸುವ ರೈಲಿನಿಂದ ನನ್ನನ್ನು ಎಸೆದಿದ್ದಾನೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂಪಾಯಿಯ ಪಾನ್ ಮಸಾಲ ಜಾಹೀರಾತಿನ ಆಫರ್ ನಿರಾಕರಿಸಿದ ಯಶ್!

ಮಹಿಳೆಯರು ನಮಾಝ್ ಮಾಡುವ ಕೊಠಡಿಗೆ ನುಗ್ಗಿ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ ಗಲಭೆ ಪ್ರಕರಣ:  ಆತ್ಮಹತ್ಯೆಗೆ ಯತ್ನಿಸಿದ ಓರ್ವ ಆರೋಪಿ

ಪಿಎಸ್ ಐ ಮರು ಪರೀಕ್ಷೆ ನಿರ್ಧಾರದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ತಲೆನೋವು!

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version