ಬಾವಿಗೆ ಹಾರಿ ಯುವಕ ಆತ್ಮಹತ್ಯೆ

death
17/08/2023

ಬಾವಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪ್ರಶಾಂತ್ ಅವರ ದೊಡ್ಡಮ್ಮ ವಾರಗಳ ಹಿಂದೆ ತೀರಿಕೊಂಡಿದ್ದು, ಅವರ ಉತ್ತರಕ್ರಿಯೆ ಕಾರ್ಯಕ್ರಮ ಬುಧವಾರ ಅವರ ಮನೆಯಲ್ಲಿ ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಮನೆಮಂದಿ ಮಲಗಿದ್ದರು. ಆದೇ ಸಮಯದಲ್ಲಿ ಇವರು ಮನೆಯಿಂದ ಹೊರಗೆ ಬಂದು ಮನೆಯ ಸಮೀಪದ ಬಾವಿಗೆ ಹಾರಿರಬೇಕು ಎಂದು ಮನೆಮಂದಿ ಶಂಕಿಸಿದ್ದಾರೆ.

ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿ

Exit mobile version