ಜಿಲ್ಲಾ ಪಂಚಾಯತಿಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ : ಆಸಕ್ತರು ಅರ್ಜಿ ಸಲ್ಲಿಸಿ
Zilla Panchayat Recruitment 2024 : ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೊಪ್ಪಳ ಜಿಲ್ಲಾ ಪಂಚಾಯಿತಿಯು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಇಲ್ಲಿದೆ..
ಈ ನೇಮಕಾತಿಗೆ ಕೊಪ್ಪಳ ಜಿಲ್ಲಾ ಪಂಚಾಯಿತಿಯು ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಗಳು, ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ, ಆಯ್ಕೆ ಪ್ರಕ್ರಿಯೆ ಹೇಗಿರಲಿ ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಗಳ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ನೀಡಲಾಗಿದೆ.
ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳು :
ಕೊಪ್ಪಳ ಜಿಲ್ಲಾ ಪಂಚಾಯತಿಯಲ್ಲಿ ” ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ” ಹುದ್ದೆ ಖಾಲಿ ಇದೆ. ಒಟ್ಟು 1 ಹುದ್ದೆ ಕಾಲಿಗೆ ಇದೆ.
ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು:
ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಅಥವಾ ಇನ್ಫಾರ್ಮಶನ್ ಸೈನ್ಸ್ ವಿಷಯದಲ್ಲಿ ಪದವಿ ಮುಗಿಸಿರಬೇಕು.
ವಯೋಮಿತಿ ಅರ್ಹತೆ ನೋಡುವುದಾದರೆ ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿದ್ದು ಗರಿಷ್ಠ 40 ವರ್ಷದ ಒಳಗಿರಬೇಕು.
ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ನಿಗದಿಪಡಿಸಿರುವ ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾದ ದಿನಾಂಕ — 20 ಸೆಪ್ಟೆಂಬರ್ 2024
* ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಕೊನೆಯ ದಿನಾಂಕ — 04 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಲಿಂಕ್: https://sevasindhuservices.karnataka.gov.in/